ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಇಚ್ಚಿಲಂಗೋಡು ನಿವಾಸಿ ರಾಧಾಕೃಷ್ಣ ಶೆಟ್ಟಿ ನಿಧನ.
ನವೆಂಬರ್ 28, 2023
0
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಇಚ್ಚಿಲಂಗೋಡು ನಿವಾಸಿ ರಾಧಾಕೃಷ್ಣ ಶೆಟ್ಟಿ ನಿಧನ.
ಬ ಂದ್ಯೋಡು: ಇಚ್ಲoಗೋಡು ಬಳಿಯ ಗೊಳಿತ್ತಡಿ ಅಕ್ಕಾರಿ ಹಿತ್ಲು ನಿವಾಸಿ ರಾಧಾಕೃಷ್ಣ ಶೆಟ್ಟಿ (64) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಬೆಳಿಗ್ಗೆ ನಿಧನರಾದರು. ಮೃತರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರೂ, ಹಿರಿಯ ಸ್ವಯಂಸೇವಕರಾಗಿದ್ದರು. ಇಚ್ಲಂಗೋಡು ಶ್ರೀ ಮಹಾಗಣಪತಿ ಮಹಾವಿಷ್ಣು ಸದಾಶಿವ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಲ್ಲಿ ಪದಾಧಿಕಾರಿಯಾಗಿ, ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಭಾರತೀಯ ಜನತಾ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಸಮಾಜಮುಖಿ ಸೇವೆಯಲ್ಲಿ ಭಾಗಿಯಾಗಿದ್ದರು. ಮೃತರು ಪತ್ನಿ ಶ್ರೀಮತಿ ಗೀತಾ, ಪುತ್ರರಾದ ರಾಕೇಶ್, ರಕ್ಷಿತ್, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಇಂದು ಬೆಳಿಗ್ಗೆ 11 ಗಂಟೆಗೆ ಇಚ್ಲಂಗೋಡಿನ ಸ್ವಗೃಹದಲ್ಲಿ ನಡೆಯಲಿದೆ. ಎಂದು ಕುಟುಂಬಿಕರು ತಿಳಿಸಿದ್ದಾರೆ.