ಕಯ್ಯಾರ್ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ. ದಿವ್ಯಬಲಿಪೂಜೆ.
ಡಿಸೆಂಬರ್ 25, 2023
0
ಕಯ್ಯಾರ್ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್.
ಬಂದ್ಯೋಡು: ಯೇಸುಕ್ರಿಸ್ತನ ಜನ್ಮದಿನವನ್ನು ಕ್ರೈಸ್ತ ಬಾಂಧವರು ಇಂದು ಸಂಭ್ರಮದಿಂದ ಆಚರಿಸಿದರು. ಹಬ್ಬದಂಗವಾಗಿ ನಿನ್ನೆ ರಾತ್ರಿ ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ ನೆರವೇರಿತು.
ಕಯ್ಯಾರ್ ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ಬಲಿಪೂಜೆಯನ್ನು ಮಂಗಳೂರು ಜೆಪ್ಪು ಸೆಮಿನರಿಯ ಪ್ರಾಧ್ಯಾಪಕ ಫಾದರ್ ಲಿಯೊ ಲಸ್ರಾದೊ ದಿವ್ಯಬಲಿ ಪೂಜೆಯನ್ನು ನೆರವೇರಿಸಿ ಸಂದೇಶ ನೀಡಿದರು. ರಾಂಚಿ ಸೆಮಿನರಿಯ ಪ್ರಾಧ್ಯಾಪಕ ಫಾದರ್ ಜೋನ್ ಕ್ರಾಸ್ತ , ಕೊಹಿಮಾ ವಲಯದ ಜೆಜ್ವಿತ್ ಧರ್ಮಗುರು ನ್ಯಾಯವಾದಿ , ಫಾದರ್ ರವಿ ಸಾಗರ್ ಎಸ್ . ಜೆ, ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ಬಲಿಪೂಜೆಯಲ್ಲಿ ಪಾಲ್ಗೊಂಡರು. ಕ್ರಿಸ್ಮಸ್ ಕ್ಯಾರಲ್ಸ್ ಹಾಗೂ ಬಲಿಪೂಜೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಪರಸ್ಪರ ಶುಭಾಶಯಗಳನ್ನು ಹಂಚಿಕೊಂಡರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.