ಸಿಪಿಐ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಧೀರ ನೇತಾರ ಬಿ.ವಿ ರಾಜನ್ ರವರ ಅನುಸ್ಮರಣಾ ಸಮ್ಮೇಳನ.
ಮಾರ್ಚ್ 03, 2024
0
ಸಿಪಿಐ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಧೀರ ನೇತಾರ ಬಿ.ವಿ ರಾಜನ್ ರವರ ಅನುಸ್ಮರಣಾ ಸಮ್ಮೇಳನ.
ಮಂಜೇಶ್ವರ: ಸಿಪಿಐ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಧೀರ ನೇತಾರ ಬಿ.ವಿ ರಾಜನ್ ರವರ ಅನುಸ್ಮರಣಾ ಸಮ್ಮೇಳನವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆಯಿತು. ಮಂಡಲ ಕಾರ್ಯದರ್ಶಿ ಜಯರಾಮ ಬಲ್ಲಂಗುಡೇಲ್ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ಶಾಸಕರಾದ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಜಿಲ್ಲಾ ಕಾರ್ಯದರ್ಶಿ ಸಿ.ಪಿ ಬಾಬು, ರಾಜ್ಯ ಸಮಿತಿ ಸದಸ್ಯರಾದ ಟಿ.ಕೃಷ್ಣನ್, ಗೋವಿಂದನ್ ಪಳ್ಳಿಕಾಪ್ಪಿಲ್, ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್, ಅಜಿತ್ ಎಂ.ಸಿ ಲಾಲ್ ಬಾಗ್ ಮೊದಲಾದವರು ಮಾತನಾಡಿದರು. ಜಿmಲ್ಲಾ ಸಮಿತಿ ಸದಸ್ಯರಾದ ರಾಮಚಂದ್ರ ಬಡಾಜೆ ಸ್ವಾಗತಿಸಿ, ವಂದಿಸಿದರು.