ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಖಲೀಲ್ ಬಜಾಲ್ ರಿಗೆ ಕಾಂಗ್ರೆಸ್ ವತಿಯಿಂದ ಬೀಳ್ಕೊಡುಗೆ.
ಮೇ 22, 2025
0
ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಖಲೀಲ್ ಬಜಾಲ್ ರಿಗೆ ಕಾಂಗ್ರೆಸ್ ವತಿಯಿಂದ ಬೀಳ್ಕೊಡುಗೆ.
ಮಂಜೇಶ್ವರ: ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಖಲೀಲ್ ಬಜಾಲ್ ರವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಅವರು ಶಾಲು ಹೊದೆಸಿದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಪಾವೂರು ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮ ಸಂಯೋಜಕರಾದ ಯೂತ್ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಆರಿಫ್ ಮಚ್ಚಂಪಾಡಿ, ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಝೀಝ್ ಕಲ್ಲೂರು, ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಹಮದ್ ಮನ್ಸೂರ್ ಬಿ.ಎಮ್, ಇಲ್ಯಾಸ್ ಶಾಹಿದ್, ಯಾಕೂಬ್ ಕೋಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು